ನೌಕರರ ಸಂಘಕ್ಕೆ ಶಿವಸ್ವಾಮಿ, ಸಿ.ಕೆ.ರಘು ನೇಮಕ

ನೌಕರರ ಸಂಘಕ್ಕೆ ಶಿವಸ್ವಾಮಿ, ಸಿ.ಕೆ.ರಘು ನೇಮಕ
Published on

ಹಾಸನ: ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ಜಿಲ್ಲೆಯ ಸಿ.ಎಸ್.ಶಿವಸ್ವಾಮಿ ಹಾಗೂ ರಾಜ್ಯ ಕಾರ್ಯದರ್ಶಿಯನ್ನಾಗಿ ಸಿ.ಕೆ. ರಘು ಅವರನ್ನು ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇಮಕ ಮಾಡಿದ್ದಾರೆ.

ಶಿವಸ್ವಾಮಿ ಹಾಸನದ ಚಾಮರಾಜೇಂದ್ರ ಜಿಲ್ಲಾ ಆಸ್ಪತ್ರೆಯ ಪ್ರಯೋಗ ಶಾಲೆಯಲ್ಲಿ ಹಿರಿಯ ತಾಂತ್ರಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ನೌಕರರ ಸಂಘ ಮತ್ತು ಇತರ ಸಂಘಟನೆಗಳಲ್ಲಿ ಸಾಮಾಜಿಕ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಸಿ.ಕೆ.ರಘು ಶ್ರೀ ರಾಮ್ ನಗರದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರ ಸಂಘ ಹಾಗೂ ಶಿಕ್ಷಕರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೋಮವಾರ ನೂತನವಾಗಿ ನೇಮಕವಾದ ಶಿವ ಸ್ವಾಮಿ ಮತ್ತು ರಘು ಅವರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net