ಕಾರ್ಯದರ್ಶಿಯಾಗಿ ಶಿವಪ್ರಕಾಶ್ ಮಣಿಯಾಣಿ ನೇಮಕ

shivu
Published on

ನೆಲ್ಯಾಡಿ: ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ನೆಲ್ಯಾಡಿಯ ಶಿವಪ್ರಕಾಶ್ ಮಣಿಯಾಣಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ನಿರ್ದೇಶನದ ಮೇರೆಗೆ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಈ ನೇಮಕ ಮಾಡಿದ್ದಾರೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಬೀದಿಮಜಲು ನಿವಾಸಿಯಾಗಿರುವ ಶಿವಪ್ರಕಾಶ್ ನೆಲ್ಯಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net