ಶಕ್ತಿಧಾಮ ಮಕ್ಕಳೊಂದಿಗೆ ಸ್ವಾತಂತ್ರೃ ದಿನ ಆಚರಿಸಿದ ಶಿವರಾಜ್ ಕುಮಾರ್

Shivaraj kumar
Published on

ಮೈಸೂರು: ನಗರದ ಶಕ್ತಿಧಾಮ ವಿದ್ಯಾಶಾಲೆಯಲ್ಲಿ ಮಂಗಳವಾರ 77ನೇ ಸ್ವಾತಂತ್ರೃ ದಿನವನ್ನು ಆಚರಿಸಲಾಯಿತು. ನಟ ಶಿವರಾಜ್ ಕುಮಾರ್ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.

ಸ್ವಾಂತ್ರೃ ದಿನದ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ಬ್ಯಾಂಡ್ ಪ್ರದರ್ಶನ, ದೇಶಭಕ್ತಿ ಗೀತೆ ಗಾಯನ, ಕನ್ನಡ ಮತ್ತು ಹಿಂದಿಯಲ್ಲಿ ಭಾಷಣ, ಛದ್ಮವೇಷ ಹಾಗೂ ನೃತ್ಯ ಪ್ರದರ್ಶನ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಶಕ್ತಿಧಾಮದ ಅಧ್ಯಕ್ಷೆ ಗೀತಾ ಶಿವರಾಜ್ ಕುಮಾರ್, ಸ್ವಾತಂತ್ರೃ ದಿನಾಚರಣೆ ಸಂದರ್ಭ ನಾವು ದೇಶಕ್ಕಾಗಿ ಹೋರಾಡಿದ, ಮಡಿದ ಸ್ವಾತಂತ್ರೃ ಸೇನಾನಿಗಳನ್ನು ನೆನಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಟ ಶಿವರಾಜ್ ಕುಮಾರ್ ಮಾತನಾಡಿ, ದೇಶಕ್ಕೆ ಸ್ವಾತಂತ್ರೃ ತಂದುಕೊಟ್ಟವರನ್ನು ನಾವು ಪ್ರತಿನಿತ್ಯ ಸ್ಮರಿಸಬೇಕು. ಅವರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರೃ ದೊರೆತ್ತಿದೆ. ನಮಗೆ ದೊರೆತ್ತಿರುವ ಸ್ವಾತಂತ್ರೃವನ್ನು ಒಳ್ಳೆಯ ರೀತಿ ಉಪಯೋಗಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ನಿವೃತ್ತ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಪಾಟೀಲ್, ಸಂಚಲನ ಮೈಸೂರು ಸಂಸ್ಥೆಯ ಅಧ್ಯಕ್ಷ ದೀಪಕ್, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ವೀರೇಶ್, ಶಕ್ತಿಧಾಮದ ನಿರ್ದೇಶಕಿ ಮಂಜುಳಾ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net