ವಿವಿಧೆಡೆ ಶಿವರಾತ್ರಿ ಆಚರಣೆ

18adarshkdga6
Published on

ಮಡಿಕೇರಿ: ಶಿವರಾತ್ರಿ ಅಂಗವಾಗಿ ಜಿಲ್ಲೆಯ ವಿವಿಧ ದೇವಾಲಯದಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ಶ್ರದ್ಧಾಭಕ್ತಿಯಿಂದ ಶನಿವಾರ ಜರುಗಿತು.


ನಗರದ ಓಂಕಾರೇಶ್ವರ, ವೀರಭದ್ರಮುನೇಶ್ವರ, ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ, ಕುಂದುರುಮೊಟ್ಟೆ ಚೌಡೇಶ್ವರಿ, ರಾಜರಾಜೇಶ್ವರಿ ದೇವಾಲಯ, ಭಾಗಮಂಡಲದ ಭಗಂಡೇಶ್ವರ-ತಲಕಾವೇರಿ ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಯಿತು.


ಭಕ್ತಾದಿಗಳು ದೇವಾಲಯದ ಮುಂದೆ ಸರದಿ ಸಾಲಿನಲ್ಲಿ ನಿಂತು ದೇವರ ಕೃಪೆಗೆ ಪಾತ್ರರಾದರು. ಶಿವರಾತ್ರಿ ಹಿನ್ನೆಲೆ ದೇವಾಲಯವನ್ನು ಹಸಿರು ತೋರಣ, ಪುಷ್ಪಗಳಿಂದ ಅಲಂಕರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net