ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡನೆಗೆ ಪ್ರಧಾನಿ ಸೂಚನೆ

web 1
Published on

ಮೂಡಿಗೆರೆ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟದ ರೈತರಿಗೆ ತೊಂದರೆಯಾಗದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್​ಗೆ ಪತ್ರ ಬರೆದು ವಿವರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರದಿಯಲ್ಲಿನ ಅಂಶಗಳ ಬದಲಾವಣೆ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಬಲವಾದ ವಾದ ಮಂಡಿಸಲು ಸೂಚಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

2013 ಡಿ.3ರಂದು ರಾಜ್ಯದ 19 ಸಂಸದರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕಸ್ತೂರಿ ರಂಗನ್ ವರದಿಯಿಂದ ರಾಜ್ಯದ ರೈತರಿಗೆ ತೊಂದರೆಯಾಗದಂತೆ ಕೈಗೊಳ್ಳುವಂತೆ ಮನವಿ ಮಾಡಿದಾಗ ಸಿದ್ದರಾಮಯ್ಯ ಅವರು ನಮ್ಮ ಮನವಿಯನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದಾಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅದನ್ನು ಪರಿಶೀಲನೆ ನಡೆಸಿ ಬದಲಾವಣೆ ತರಲಿಲ್ಲ. ಅಂದು ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪಿಗೆ ಈಗ ಬಿಜೆಪಿ ಸರ್ಕಾರ ತಲೆ ಕೊಡುವ ಪರಿಸ್ಥಿತಿ ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net