ಇಬ್ಬರು ವಿದ್ಯಾರ್ಥಿನಿಯರಿಗೆ ಶಾಕ್

2 SMG- BUS
ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು.
Published on

ಸಾಗರ: ಮುಂದಿದ್ದ ಬೈಕ್ ತಪ್ಪಿಸಲು ಹೋದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ವಿದ್ಯುತ್ ಪ್ರವಹಿಸಿದ ಘಟನೆ ಬುಧವಾರ ಸಾಗರ ತಾಲೂಕು ಸಿಗಂದೂರು ರಸ್ತೆಯಲ್ಲಿ ನಡೆದಿದೆ.

ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್, ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ವಿದ್ಯುತ್ ಪ್ರವಹಿಸಿ ಎಚ್ಚರ ತಪ್ಪಿದ್ದಾರೆ. ಅವರನ್ನು ತಕ್ಷಣ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಬಸ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಬಸ್‌ನಲ್ಲಿ ೩೫ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಎಲ್ಲರೂ ಅಪಾಯದಿಂದ ಪಾರಾದರು. ಸ್ಥಳಕ್ಕಾಗಮಿಸಿದ ಮೆಸ್ಕಾಂ ಇಂಜಿನಿಯರ್ ಆಲಿ ಮತ್ತು ಸಿಬ್ಬಂದಿ ಮುರಿದ ಕಂಬವನ್ನು ತೆರವುಗೊಳಿಸಿ ಹೊಸದನ್ನು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net