ಮಗನ ಸಾವಿನ ಆಘಾತ, ತಾಯಿ ಮೃತ್ಯು

ramesh
Published on

ಶಿರ್ವ: ಬಂಟಕಲ್ಲು-ಪಾಂಬೂರು ಮಾರ್ಗದಲ್ಲಿ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರು ಭಾಗದಿಂದ ಬಂದ ಕಾರು ಪಾಂಬೂರು ಸಮೀಪ ಭಾನುವಾರ ಡಿಕ್ಕಿ ಹೊಡೆದ ಪರಿಣಾಮ ಸವಾರ ರಮೇಶ ಮೂಲ್ಯ(51) ತೀವ್ರ ಗಾಯಗೊಂಡಿದ್ದು, ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಮೃತಪಟ್ಟಿದ್ದರು.

ಮೃತಪಟ್ಟ ರಮೇಶ್ ಅವರ ದೇಹವನ್ನು ಅಂತಿಮ ಸಂಸ್ಕಾರಕ್ಕೆ ಮಂಗಳವಾರ ಶಿರ್ವ ಕೊಲ್ಲಬೆಟ್ಟು ಅವರ ಮನೆಗೆ ತರಲಾಯಿತು. ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಘಾತಗೊಂಡ ತಾಯಿ ಇಂದಿರಾ ಮೂಲ್ಯ(74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು ಮಂಗಳವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ತಾಯಿ ಬುಧವಾರ ಮೃತಪಟ್ಟಿದ್ದಾರೆ. ರಮೇಶ್ ಮೂಲ್ಯ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net