ಮೈಸೂರು: ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯಿಂದ ಫೆ.4 ರಂದು ನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಿಗುರು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆ ಮುಖ್ಯಸ್ಥ ದೀಪಕ್ ತಿಳಿಸಿದರು.
ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೂ ಕಾರ್ಯಕ್ರಮ ನಡೆಯಲಿದೆ. 1 ರಿಂದ 10ನೇ ತರಗತಿವರೆಗೆ ಸುಮಾರು 1500 ವಿದ್ಯಾರ್ಥಿಗಳು, 22 ಬಗೆಯ ವಿವಿಧ ಸ್ಪರ್ಧೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಕ್ಕಳಲ್ಲಿ ಭಯ ಹೋಗಲಾಡಿಸಿ, ಅವರ ಆತ್ಮವಿಶ್ವಾಸ ಹೆಚ್ಚಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಮ್ಮ ಸಂಸ್ಥೆ ರಾಷ್ಟ್ರವ್ಯಾಪಿ ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಆರೋಗ್ಯ, ಶಿಕ್ಷಣ ಮತ್ತು ಪರಿಸರ ವಿಷಯಗಳಲ್ಲಿ ಕೆಲಸ ಮಾಡುತ್ತಿದೆ ಎಂದರು.
ಸಂಸ್ಥೆಯ ಸದಸ್ಯರಾದ ಶ್ರೀಕಂಠಮೂರ್ತಿ, ರುಚಿತಾ, ಉದಿತ್‌ಗೌಡ, ಚೈತ್ರಾ, ರಕ್ಷಿತ್ ಇತರರು ಇದ್ದರು.