

ಶಿವಮೊಗ್ಗ: ಕರ್ನಾಟಕದಲ್ಲಿ ಲವ್ ಜಿಹಾದ್ ನಡೆಸುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ರಾಜ್ಯದಲ್ಲಿ ಹಿಂದು ಹೆಣ್ಣು ಮಕ್ಕಳಿಗೆ ಗೌರವವೇ ಇಲ್ಲದಂತಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ್ದು ರಾಕ್ಷಸೀ ರೂಪವಾಗಿದೆ. ವಿಶೇಷವಾಗಿ ಲವ್ ಜಿಹಾದ್ ಬಗ್ಗೆ ಹಿಂದು ಹೆಣ್ಣು ಮಕ್ಕಳು ಹುಷಾರಾಗಿರಬೇಕಿದೆ. ಪ್ರೀತಿ, ಪ್ರೇಮದ ಹೆಸರಲ್ಲಿ ಅಮಾಯಕ ಹೆಣ್ಣು ಮಕ್ಕಳನ್ನು ವಂಚಿಸುವವರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಸ್ಲಿಮರಿಗೆ ಉತ್ತೇಜನ ನೀಡುವ ಮೂಲಕ ದೇಶದ ಮುಂದೆ ರಾಜ್ಯವನ್ನು ಬೆತ್ತಲೆ ಮಾಡಲಾಗಿದೆ. ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಕಾನೂನು ಮತ್ತು ಸಂವಿಧಾನಕ್ಕೂ ಬೆಲೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳಲ್ಲೂ ಮುಸ್ಲಿಮರಿಗೆ ಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನೇ ಮುಸ್ಲಿಮರಿಗೆ ಮಾರಾಟ ಮಾಡಲು ಹೊರಟಿದೆ. ಕಾಂಗ್ರೆಸ್ ನಡವಳಿಕೆಯಿಂದ ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ. ಹಿಂದುಗಳ ತಾಳ್ಮೆ ಪರೀಕ್ಷೆ ಮಾಡಬೇಡಿ. ಇದೇ ರೀತಿ ಮುಂದುವರಿದರೆ ಜನರು ಕಾಂಗ್ರೆಸಿಗರನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೊಡೆಯುವ ಕಾಲ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಾಡಗೀತೆ ಓದುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ ಮೊದಲು ಡಿ.ಕೆ.ಶಿವಕುಮಾರ್ ಅವರೇ ಸಂವಿಧಾನ ಓದಲಿ ಎಂದು ಸವಾಲೆಸೆದರು. ರಾಜ್ಯ ಸರ್ಕಾರ ಮತದಾರರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಕರ್ನಾಟಕದಲ್ಲಿ ಇದು ಕೊನೆಯ ಕಾಂಗ್ರೆಸ್ ಸರ್ಕಾರ ಆಗಲಿದೆ ಎಂದು ಭವಿಷ್ಯ ನುಡಿದರು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ಪ್ರಮುಖರಾದ ರಾಜು, ಸತ್ಯನಾರಾಯಣ, ಎಸ್.ಜಿ.ಬಾಲು ಸುದ್ದಿಗೋಷ್ಠಿಯಲ್ಲಿದ್ದರು.