ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಿ

Devadurga police meeting
Published on

ದೇವದುರ್ಗ: ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಪಿಐ ಸುಭಾಷ್‌ಚಂದ್ರ ಅಧ್ಯಕ್ಷತೆಯಲ್ಲಿ ಶನಿವಾರ ವರ್ತಕರ ಸಭೆ ನಡೆಯಿತು.

ಸಿಪಿಐ ಸುಭಾಷ್‌ಚಂದ್ರ ಮಾತನಾಡಿ, ಎಲ್ಲ ವರ್ತಕರು ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಅಂಗಡಿ ಮುಂದೆ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾನೂನು ಬಾಹಿರ ಚಟುವಟಿಕೆ ನಡೆಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರಬೇಕು. ಪಟ್ಟಣದಲ್ಲಿ ಶಾಂತಿ, ಸುವ್ಯವಸ್ಥೆಗೆ ವರ್ತಕರ ಸಹಕಾರ ಅಗತ್ಯವಿದೆ ಎಂದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಸೂಗಪ್ಪಗೌಡರ ಜನರಲ್ ಸ್ಟೋರ್‌ಗೆ ಗುರುವಾರ ರಾತ್ರಿ ನುಗ್ಗಿದ ಕೈಲಾಸ್ ಎನ್ನುವ ಯುವಕ ರಾಡ್‌ನಿಂದ ಬೀಗ ಮುರಿದು ಕಳುವಿಗೆ ಯತ್ನಿಸಿದ್ದಾನೆ. ವರ್ತಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಬಂದಾಗ ಆರೋಪಿ ಸಿಕ್ಕಿಹಾಕಿಕೊಂಡರೂ ಅವನ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿಲ್ಲ. ದೂರುಕೊಟ್ಟ ನಂತರ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ ಎಂದು ವರ್ತಕರು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net