ಶಿರಗುಪ್ಪಿಯಲ್ಲಿ ಅಂಗಡಿ ಬೆಂಕಿಗಾಹುತಿ

18SRP1-Web
ಶಿರಗುಪ್ಪಿಯ ಮಲ್ಲಿಕಾರ್ಜುನ ಟ್ರೇಡರ್ಸ್ ಅಂಗಡಿಯಲ್ಲಿ ಬೆಂಕಿಯಿಂದ ಪರಿಕರಗಳು ಹಾನಿಯಾಗಿರುವುದು.
Published on

ಶಿರಗುಪ್ಪಿ: ಕಳೆದ ತಿಂಗಳು ಗ್ರಾಮದ ಬಸ್ ನಿಲ್ದಾಣದ ಪಕ್ಕದ ಫರ್ನೀಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಬೆನ್ನಲ್ಲೇ ಬುಧವಾರ ರಾತ್ರಿ ಫರ್ನೀಚರ್ ಅಂಗಡಿ ಎದುರಿನ ಮಲ್ಲಿಕಾರ್ಜುನ ಟ್ರೇಡರ್ಸ್ ಹೆಸರಿನ ಸಿರ‌್ಯಾಮಿಕ್ ಹಾಗೂ ಇತರ ಕಟ್ಟಡ ನಿರ್ಮಾಣ ವಸ್ತುಗಳ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಹಾನಿ ಸಂಭವಿಸಿದೆ.

ಪ್ರಶಾಂತ ಚಿಂಚಲೆ ಅವರ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ ಅವರು, ಎಂದಿನಂತೆ ರಾತ್ರಿ 9 ಗಂಟೆಗೆ ಅಂಗಡಿ ಬಂದ್ ಮಾಡಿ ತಮ್ಮ ಸ್ವಂತ ಊರಾದ ಚಿಕ್ಕೋಡಿ ತಾಲೂಕಿನ ಇಂಗಳಿ ಗಾವಠಾಣಗೆ ತೆರಳಿದ್ದರು. ರಾತ್ರಿ 9.30ರ ವೇಳೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಅಕ್ಕಪಕ್ಕದ ಜನರು ಗ್ರಾಪಂನವರಿಗೆ ತಿಳಿಸಿದ್ದಾರೆ. ಗ್ರಾಪಂ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ, ಕಾಗವಾಡ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಕಾಗವಾಡ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ.

ಚಿಕ್ಕೋಡಿ ಕೃಷ್ಣಾ ಸಕ್ಕರೆ ಕಾರ್ಖಾನೆಯ ಎರಡು ಹಾಗೂ ಉಗಾರ ಸಕ್ಕರೆ ಕಾರ್ಖಾನೆಯ ಒಂದು ಅಗ್ನಿ ಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿವೆ. 30 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು ಅಂದಾಜಿಸಲಾಗಿದೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net