ಅಂಗಡಿ ತೆರೆಯಲು ಅನುಮತಿ

8npn1b-Web
ನಿಪ್ಪಾಣಿ ನಗರದ ವ್ಯಾಪಾರಸ್ಥರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು. ತಹಸೀಲ್ದಾರ್ ಪ್ರಕಾಶ ಗಾಯಕವಾಡ, ಪೌರಾಯುಕ್ತ ಮಹಾವೀರ ಬೋರಣ್ಣವರ, ಜಯವಂತ ಭಾಟಲೆ, ರಾಜು ಗುಂಡೇಶಾ ಇತರರು ಇದ್ದರು.
Published on

ನಿಪ್ಪಾಣಿ: ಲಾಕ್‌ಡೌನ್ ಅವಧಿಯಲ್ಲಿ ನಿಪ್ಪಾಣಿ ವ್ಯಾಪಾರಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಬಟ್ಟೆ, ಪಾತ್ರೆ ಹಾಗೂ ಇತರ ವ್ಯಾಪಾರಸ್ಥರು ವಹಿವಾಟು ನಡೆಸಲು ಶನಿವಾರದಿಂದ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಆರಂಭಿಸಲು ಅನುಮತಿ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಶುಕ್ರವಾರ ವ್ಯಾಪಾರಸ್ಥರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವ್ಯಾಪಾರಸ್ಥರು ಲಾಕ್‌ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೊಬೈಲ್, ಸ್ಟೇಷನರಿ, ಬೈಸಿಕಲ್, ಟ್ರಾನ್ಸ್‌ಪೋರ್ಟ್ ಮೊದಲಾದ ಅಂಗಡಿಗಳನ್ನು ತೆರೆಯುವ ಬಗ್ಗೆ ಶೀಘ್ರ ಚರ್ಚಿಸಿ ಅನುಮತಿ ನೀಡಲಾಗುವುದು. ಆದರೆ, ವ್ಯಾಪಾರಸ್ಥರು ಯಾವುದೇ ತಕರಾರು ಬರದಂತೆ ವಹಿವಾಟು ನಡೆಸಬೇಕು. 144 ಕಲಂ ಇನ್ನೂ ಜಾರಿಯಲ್ಲಿದೆ ಎಂದರು. ಪೌರಾಯುಕ್ತ ಮಹಾವೀರ ಬೋರಣ್ಣವರ ಮಾತನಾಡಿ, ನಗರಸಭೆಯಿಂದ ಲೈಸೆನ್ಸ್ ಹೊಂದಿದವರು ಕಡ್ಡಾಯವಾಗಿ ಮುಚ್ಚಳಿಕೆ ಪತ್ರ ಬರೆದುಕೊಟ್ಟು ಅಂಗಡಿಗಳನ್ನು ತೆರಯಬೇಕು ಎಂದರು. ತಹಸೀಲ್ದಾರ್ ಪ್ರಕಾಶ ಗಾಯಕವಾಡ, ಜಯವಂತ ಭಾಟಲೆ, ರಾಜು ಗುಂಡೇಶಾ ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net