ಹುಬ್ಬಳ್ಳಿ: ಇಲ್ಲಿನ ಮೂರುಸಾವಿರ ಮಠದ ಹತ್ತಿರದ ಕಿಚನ್ ವೇರ್ ಅಂಗಡಿಯೊಂದರ ಕಿಟಕಿ ಮುರಿದು ಕಳ್ಳತನ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಸುಮಾರು 7 ಲಕ್ಷ ರೂ.ಗೂ ಹೆಚ್ಚು ನಗದು ದೋಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕಮರಿಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.