

ಮಂಗಳೂರು: ನಗರದ ಜಪ್ಪು ಕಾಸಿಯಾ ಹೈಸ್ಕೂಲ್ ಸಮೀಪ ಗುರುವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗ್ದಿದಾರೆ. ಪಾಂಡೇಶ್ವರ ಅಗ್ನಿಶಾಮಕದಳ ಅಧಿಕಾರಿ ಭರತ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರಿನ ಎದುರು ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.