ಜಂಬೂಸವಾರಿ ಮೆರವಣಿಗೆ ಹಿನ್ನೆಲೆ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅ.26ಕ್ಕೆ ಮೈಸೂರಿಗೆ ಭೇಟಿ

yeddyurappa-_EPS_1
Published on

ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅ‌26 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ರಸ್ತೆ ಮೂಲಕ 12.30ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2.45ಕ್ಕೆ ಅರಮನೆ ಆವರಣಕ್ಕೆ ಆಗಮಿಸುವ ಅವರು 2.59 ರಿಂದ 3.20 ರೊಳಗೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವರು. 3.40 ರಿಂದ 4.15 ರೊಳಗೆ ಚಾಮುಂಡೇಶ್ವರಿ ತಾಯಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸುವರು. ಸಂಜೆ 4.30 ಗಂಟೆಗೆ ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿ ಹೆಲಿಕಾಪ್ಟರ್ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net