

ಧಾರವಾಡ: ರಾಜ್ಯಸಭೆ ಚುನಾವಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಹಾಗೂ ಹು-ಧಾ ಮಹಾನಗರ ಯುವ ಮೋರ್ಚಾ ವತಿಯಿಂದ ಜಿಲ್ಲಾಽಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್‌ನ ನಾಸೀರ್‌ಹಸೇನ್ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ವಿಧಾನಸೌಧದಲ್ಲಿ ದೇಶದ್ರೋಹಿ ಘೋಷಣೆ ಕೂಗಿದ್ದರಿಂದ ನಾಸೀರ್‌ಹುಸೇನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ನಾಸೀರ್‌ಹುಸೇನ್ ಭಾವಚಿತ್ರ, ಪಾಕಿಸ್ತಾನ ಧ್ವಜ ಹಾಗೂ ಕಾಂಗ್ರೆಸ್ ಚಿಹ್ನೆಯುಳ್ಳ ಬಾವುಟಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇದೇವೇಳೆ ಸಿಎಂ, ಡಿಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆಯೊಡ್ಡಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಂಕರ ಕೋಮಾರದೇಸಾಯಿ, ಸಂಜಯ ಕಪಟಕರ, ಶಕ್ತಿ ಹಿರೇಮಠ, ಉದಯ ಯಂಡಿಗೇರಿ, ಮೋಹನ ರಾಮದುರ್ಗ, ಪ್ರಕಾಶ ನಾಝರೆ, ಕರಿಯಪ್ಪ ಸುಣಗಾರ, ಇತರರಿದ್ದರು.
ಇದೇವೇಳೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತ್ಯೇಕ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.