

ರಾಯಚೂರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರದಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರಗತಿ ಪರಿಶೀಲನೆ ಸಭೆಗೆ ಗೈರಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಡಿ ಬಡಿಗೇರ್ ಅವರಿಗೆ ಶೋಕಾಸ್ ನೋಟೀಸ್ ಜಾರಿಗೊಳಿಸಿ, ಪುನಃ ಸಭೆಗೆ ಗೈರಾದಲ್ಲಿ ಅಮಾನತ್ತುಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಽಕಾರಿ ನಿತೀಶ ಕೆ. ಅವರು ಜಿಪಂ ಸಿಇಓ ಅವರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಽಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲಾ ಪಂಚಾಯತ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ
ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ೧೫ ಹೊಸ ಅಂಶಗಳ ಕಾರ್ಯಕ್ರಮ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿನ ಉರ್ದು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಶಿಕ್ಷಕರ ಕೊರತೆ, ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಮಾಹಿತಿ ನೀಡಲು ಡಿಡಿಪಿಐ ಅವರು ಸಭೆಗೆ ಕಚೇರಿ ಅಽಕಾರಿಯನ್ನು ಕಳುಹಿಸಿ ಸಭೆಗೆ ಗೈರಾದ ಬಗ್ಗೆ ಮಾಹಿತಿ ನೀಡದೇ ಗೈರಾಜರಿಯಾಗಿದ್ದಾರೆ.
ಜಿಲ್ಲಾ ಪಂಚಾಯತ ಸಿಇಒಗೆ ಹಾಗೂ ಜಿಲ್ಲಾಽಕಾರಿಗೆ ಮಾಹಿತಿ ನೀಡಿದೇ ಇರುವುದರಿಂದ ಶೋಕಾಸ್ ನೋಟೀಸ್ ಜಾರಿ ಮಾಡಿದರು. ಮತ್ತೋಮ್ಮೆ ಸಭೆಗೆ ಗೈರಾದಲ್ಲಿ ಅಮಾನತ್ತುಗೊಳಿಸಿ ಸರ್ಕಾರಕ್ಕೆ ವರದಿ ನೀಡುವುದಾಗಿ ಎಚ್ಚರಿಸಿದರು. ಜಿಲ್ಲೆಯಲ್ಲಿ ಒಟ್ಟು ೧೦೪ ಉರ್ದು ಶಾಲೆಗಳಿದ್ದು, ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿ ತೊಂದರೆಗೀಡಾಗಿದ್ದಾರೆ, ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ಇಲ್ಲದೆ ಇರುವುದರಿಂದ ತೊಂದರೆಗೀಡಾಗಿದ್ದಾರೆ ಎಂದು ಅನುಷ್ಠಾನ ಸಮಿತಿ ಸದಸ್ಯರು ದೂರಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಯಡಿಯಲ್ಲಿ ೨೪೧೯ ಮನೆಗಳು ಮಂಜೂರಾಗಿದ್ದು ಅಲ್ಪಸಂಖ್ಯಾತರು ಹೆಚ್ಚಿರುವ ಜಿಲ್ಲೆಯಲ್ಲಿ ಶೇ.೧೦ ರಷ್ಟು ಮೀಸಲಾಗಿದ್ದು, ಶೇಕಡಾವಾರು ಹೆಚ್ಚಳ ಮಾಡಿ ಕೇಂದ್ರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು, ಸಾರಥಿ ಯೋಜನೆ, ಶ್ರಮ ಶಕ್ತಿ ಯೋಜನೆ ವೃತ್ತಿ ಪ್ರೋತ್ಸಾಹ ಯೋಜನೆಯಡಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಸಾಲ ಮಂಜೂರು ಮಾಡಿ, ಹೆಚ್ಚಿನ ರೀತಿಯ ಪ್ರೋತ್ಸಾಹ ಕ್ಕೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಮದರಸಾಗಳಿಗೆ ಅಧುನೀಕರಣ ಯೋಜನೆ ಪ್ರಗತಿವಾರು ಸಾಽಸಲು ಸೂಚಿಸಿದರು.ಐಎಎಸ್ ಮತ್ತು ಕೆಎಎಸ್‌ಗಳಿಗೆ ಸಿದ್ದತೆ ನಡೆಸುತ್ತಿರುವವರಿಗೆ ಪ್ರೋತ್ಸಾಹ ನೀಡಲು ತರಬೇತಿ ಕೇಂದ್ರಗಳು ಆರಂಭಿಸಲು ಕ್ರೀಯಾಯೋಜನೆ ರೂಪಿಸಿ ಸಲ್ಲಿಸಲು ವಕ್ ಅಽಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಅಲ್ಪ ಸಂಖ್ಯಾAತರ ಮೊರಾರ್ಜಿ ವಸತಿ ಶಾಲೆ, ಡಾ.ಎಪಿಜೆ ಅಬ್ದುಲ್ ಕಲಾಂ ಶಾಲೆ, ಮೌಲಾನ್
ಆಜಾದ್ ಮಾದರಿ ಶಾಲೆ, ಕಟ್ಟಡ ನಿರ್ಮಾಣ ಬಾಕಿ ಕಾಮಗಾರಿ ಪೂರ್ಣಗೊಳಿಸಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವೀನ ಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರದಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನ ಸದಸ್ಯರಾದ ಮಹಮದ್ ನಜೀರ್, ಮಹಮದ್ ಆಯ್ಯೂಬ್, ವಿಕಾಸ್ ರುನವಾಲ್ ಜೈನ್, ವಕ್ ಇಲಾಖೆ ಅಽಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಽಕಾರಿಗಳು ಇದ್ದರು.