ಸಿಎಂಗೆ ಶೋಕಾಸ್ ನೋಟಿಸ್ ಸರಿಯಲ್ಲ

CM Siddaramaiah
Published on

ಮೈಸೂರು: ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ದೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಡಿರುವ ಆರೋಪ ಸುಳ್ಳಾಗಿದ್ದರೂ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ ಎಂದು ಡಾ. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶ್ರೀಧರ ಕಲಿವೀರ ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ಪತ್ನಿಗೆ ಬಂದಿರುವ ಜಮೀನನ್ನು ಪರಿಶಿಷ್ಟ ಜಾತಿಗೆ ಸೇರಿದವರು ಖರೀದಿ ಮಾಡಿದ್ದರು. ಆದ್ದರಿಂದ ಅದು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಜತೆಗೆ ಮುಡಾ ಸಹ ಕಾನೂನುಬಾಹಿರವಾಗಿ ಅದನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರವಾಗಿ ನಿವೇಶನ ನೀಡಿರುವಾಗ ವಿವಾದ ಎಲ್ಲಿದೆ? ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಪರಿಶಿಷ್ಟರ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಆದರೆ ಅದರಲ್ಲಿನ ಕೆನೆಪದರ ಎಂಬ ಮಿತಿ ಕೈ ಬಿಟ್ಟು ರಾಜ್ಯ ಸರ್ಕಾರ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ಎಂ.ಗೋವಿಂದರಾಜು, ಮಂಜುನಾಥ ಅಣ್ಣಯ್ಯ, ಎ.ಗೋಪಾಲ್, ನಾಗೇಶ್, ಕಾಂತರಾಜ್ ಹಾಗೂ ತಿಮ್ಮಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net