

ಬೆಂಗಳೂರು: ( Heavy Rain ) ರಾಜಧಾನಿಯಲ್ಲಿ ಬೆಳಗ್ಗೆಯೇ ಮೋಡ ಕವಿದ ವಾತಾವರಣವಿದ್ಧು, ಕೆಲ ಗಂಟೆಗಳಲ್ಲೇ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಶವಂತಪುರ , ಮಹಾಲಕ್ಷ್ಮಿ ಲೇಔಟ್ ಪೀಣ್ಯಾ, ದಾಸರಹಳ್ಳಿ, ನಾಗಸಂದ್ರ ಭಾಗಗಳಲ್ಲಿ ತುಂತುರು ಮೆಳೆಯಾಗ್ತಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.
ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.