ಕಾನ್‌ಬೈಲ್ ಶಾಲೆಯಲ್ಲಿ ಶ್ರದ್ಧಾ ಸ್ವಚ್ಛತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಸದಸ್ಯರು ಕಾನ್‌ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆಚರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಸದಸ್ಯರು ಕಾನ್‌ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆಚರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
Published on

ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಆವರಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಬೆಳೆದಿದ ಕಾಡು ಗಿಡಗಂಟಿಗಳನ್ನು  ಕಡಿದು ಸ್ವಚ್ಛಗೊಳಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿ ಶಾಲೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಭವ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವಸಹಾಯ ಸಂಘಗಳಾದ ಜನನಿ, ಮೂಕಾಂಬಿಕ, ಅನ್ನಪೂರ್ಣ, ಶ್ರೀಸರಸ್ವತಿ, ನೇತಾಜಿ ಹಾಗೂ ಪರಮೇಶ್ವರ ಸಂಘಗಳ ಪ್ರಂಬಧಕರು ಹಾಗೂ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಉಪಾಧ್ಯಕ್ಷೆ ಗೀತಾ, ಒಕ್ಕೂಟದ ಕಾರ್ಯದರ್ಶಿ ಪುಷ್ಪಲತಾ, ಸೇವಾ ಪ್ರತಿನಿಧಿ ಯಶೋದಾ, ಎಸ್‌ಡಿಎಂಸಿ ಸದಸ್ಯರಾದ ನಾಗರಾಜು, ತಿಮ್ಮಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net