ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

Shram Dona, cleaning program
Shram Dona, cleaning program in vijayapura
Published on

ವಿಜಯಪುರ: ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಜತೆಗೆ ಸ್ವಚ್ಛತೆಗೂ ಆದ್ಯತೆ ನೀಡಬೇಕು ಎಂದು ಪುರಸಭೆ ಅಧ್ಯಕ್ಷೆ ವಿಮಲಾ ಬಸವರಾಜ್ ತಿಳಿಸಿದರು.
ಪಟ್ಟಣದಲ್ಲಿ ಪುರಸಭೆಯಿಂದ ಗರಡಿಮನೆ ರಸ್ತೆಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಹಮ್ಮಿಕೊಂಡಿದ್ದ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಮುಂಬರುವ ಅಮಾವಾಸ್ಯೆ ಪ್ರಯುಕ್ತ ಸಾರ್ವಜನಿಕರು ಆಗಮಿಸಿ, ಹಿರಿಯರಿಗೆ ಪೂಜೆ ಸಲ್ಲಿಸುವ ಸಂದರ್ಭ ಯಾವುದೆ ತೊಂದರೆ ಆಗದಂತೆ ರುದ್ರಭೂಮಿಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಮಾತನಾಡಿ, ಪ್ರತಿವರ್ಷವೂ ಪುರಸಭೆಯಿಂದ ಸ್ವಚ್ಛತೆ ಕಾರ್ಯಕ್ರಮದ ಜತೆಗೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಎಲ್ಲರೂ ಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಪಟ್ಟಣದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net