ದೇಗುಲ ಆವರಣದಲ್ಲಿ ಶ್ರಮದಾನ

01M.D.R.3
ಮದ್ದೂರಿನ ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಭಾನುವಾರ ಸ್ವಚ್ಛತಾ ಕಾರ್ಯ ನಡೆಯಿತು. ಯಶೋದಮ್ಮ, ಶ್ವೇತಾ ಅಶೋಕ್, ಶಿವದಾಸ್ ಸತೀಶ್, ಎಂ.ಸಿ.ಸಿದ್ದು, ಮಧುಕುಮಾರ್, ಮಮತಾ, ಶಶಿಕಲಾ, ಸಿದ್ದಮ್ಮ ಇದ್ದರು.
Published on

ಮದ್ದೂರು: ಗಾಂಧಿ ಜಯಂತಿ ಅಂಗವಾಗಿ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಭಾನುವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ತಾಲೂಕು ಮಹಿಳಾ ಅಧ್ಯಕ್ಷೆ ಶ್ವೇತಾ ಅಶೋಕ್ ಮಾತನಾಡಿ, ಮಹಾತ್ಮ ಗಾಂಧಿ ಅವರ ಆಶಯದಂತೆ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗಾಂಧಿ ಜಯಂತಿಯಂದು ತಾವೇ ಖುದ್ದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತೆ ಬಗ್ಗೆ ದೇಶದ ಜನರಿಗೆ ಅರಿವು ಮೂಡಿಸುತ್ತಿರುವುದು ಸಂತೋಷ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಯಶೋದಮ್ಮ, ತಾಲೂಕು ಅಧ್ಯಕ್ಷ ಶಿವದಾಸ್ ಸತೀಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ನಗರ ಘಟಕ ಅಧ್ಯಕ್ಷ ಮಧುಕುಮಾರ್, ಮುಖಂಡರಾದ ಧನಂಜಯ, ಮಮತಾ, ಶಶಿಕಲಾ, ಸಿದ್ದಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net