ಪುರಾಣ ಪ್ರವಚನ ಮಂಗಲ

New Navanagar
Published on

ಹುಬ್ಬಳ್ಳಿ : ಇಲ್ಲಿನ ನವನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನವನಗರ ನಿವಾಸಿಗಳ ಹಿತೋದ್ಧಾರಕ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಬುರ್ಗಿ ಶ್ರೀ ಶರಣಬಸವೇಶ್ವರರ ಪುರಾಣ ಪ್ರವಚನ ಕಾರ್ಯಕ್ರಮ ಸೆ. 3ರಂದು ಮಂಗಲಗೊಳ್ಳಲಿದೆ.

ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಈ ಸಮಾರಂಭದಲ್ಲಿ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಒಂದು ತಿಂಗಳ ಕಾಲ ಪುರಾಣ ಪ್ರವಚನ ನೀಡಿದ ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗೌರವ ಸಮರ್ಪಣೆ ನಡೆಯಲಿದೆ. ಬಸವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು.

ದಾಸೋಹ : ಪುರಾಣ ಮಂಗಲದ ಅಂಗವಾಗಿ ಮಧ್ಯಾಹ್ನ 1 ಗಂಟೆಗೆ ದಾಸೋಹ ಸೇವೆಯಲ್ಲಿ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net