ಶ್ರೀ ಚೌಡೇಶ್ವರಿ ಪೂಜೋತ್ಸವ ಸಂಪನ್ನ

Published on


ಕೊಡಗು : ಸೋಮವಾರಪೇಟೆ ಸಮೀಪದ ಹಾನಗಲ್ಲು ಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೋತ್ಸವ ಗುರುವಾರ ಸಂಪನ್ನಗೊಂಡಿತು. ವಾರ್ಷಿಕ ಪೂಜೋತ್ಸವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಗಂಗಾ ಪೂಜೆಯೊಂದಿಗೆ ಆರಂಭಗೊಂಡ ವಾರ್ಷಿಕ ಪೂಜೋತ್ಸವಲ್ಲಿ ಗಣಪತಿ ಹೋಮ, ಅಲಂಕಾರ ಸೇವೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನೆರವೇರಿತು.ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಗಣೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪೂಜಾ ಕೈಂಕರ್ಯದ ನೇತೃತ್ವ ವಹಿಸಿದ್ದರು. ಶಾಸಕ ಡಾ.ಮಂತರ್‌ಗೌಡ ಪ್ರಮುಖರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net