

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ ಹೆಗ್ಗಡೆ ಮಾರ್ಗದರ್ಶನದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ರಚನೆಯಾದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಬೆಳ್ತಂಗಡಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಸಮಿತಿಯ ಅಧ್ಯಕ್ಷ ಸೀತಾರಾಂ ಹೇಳಿದರು.
ಬೆಳ್ತಂಗಡಿಯಲ್ಲಿ ನಡೆದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಕೋರ್ ಕಮಿಟಿ ಸಭೆ ಉದ್ಘಾಟಿಸಿ ಮಾತನಾಡಿ, ಪ್ರಾಕೃತಿಕ ವಿಕೋಪ ನಿರ್ವಹಣೆ ಸಹಿತ ತುರ್ತು ಪರಿಸ್ಥಿತಿ ಎದುರಿಸಲು 90 ತಾಲೂಕಿನಲ್ಲಿ ರಚಿಸಲಾದ 10,300 ಸ್ವಯಂಸೇವಕರ ತಂಡ ಕಾರ್ಯವೈಖರಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿದರು. ಶೌರ್ಯ ವಿಪತ್ತು ಘಟಕದ ರಾಜ್ಯ ಯೋಜನಾಧಿಕಾರಿ ಜೈವಂತ ಪಟಗಾರ, ಸ್ನೇಕ್ ಪ್ರಕಾಶ್, ಕ್ಯಾಪ್ಟನ್ ಸಂತೋಷ್, ಕ್ಯಾಪ್ಟನ್ ಸತೀಶ್, ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ ಆಚಾರ್ಯ, ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ, ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ಎಲ್ಲ ಘಟಕದ ಪ್ರತಿನಿಧಿಗಳು, ಸಂಯೋಜಕರು ಹಾಗೂ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೇಲ್ವಿಚಾರಕ ವಸಂತ ಹರೀಶ ಸ್ವಾಗತಿಸಿದರು. ರಾಮ್ ಕುಮಾರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.