ಶ್ರೀ ಗುರುದೇವ ಸಹಕಾರಿ ಕುಂಬ್ರದಲ್ಲಿ ಶಾಖೆ ಉದ್ಘಾಟನೆ

Published on

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 23ನೇ ಶಾಖೆಯ ಉದ್ಘಾಟನಾ ಸಮಾರಂಭ ನ.24ರಂದು ಕುಂಬ್ರ ಅಕ್ಷಯ ಆರ್ಕೆಡ್‌ನಲ್ಲಿ ನಡೆಯಲಿದೆ.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಚೇರಿ ಉದ್ಘಾಟಿಸಲಿದ್ದಾರೆ. ವಿ.ಪ. ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ನಿರಖು ಠೇವಣಿ ಸರ್ಟಿಫಿಕೇಟ್ ಉದ್ಘಾಟಿಸಲಿದ್ದಾರೆ. ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ್ ರೈ ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ.

ಕೆದಂಬಾಡಿ ಗ್ರಾ.ಪಂ. ಅಧ್ಯಕ್ಷ ಸುಜಾತ ಮುಳಿಗದ್ದೆ, ಕುಂಬ್ರ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರಕಾಶ್‌ಚಂದ್ರ ರೈ, ಉದ್ಯಮಿ ಪುರಂದರ ರೈ, ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆರ್.ಸಿ.ನಾರಾಯಣ, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ ರಾಯ, ಪರ್ಪುಂಜ ರಾಮಜಾಲು ಗರಡಿ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಕೆಯ್ಯೂರು ವರ್ತಕರ ಸಂಘದ ಅಧ್ಯಕ್ಷ ನಿವೃತ್ತ ತಹಸೀಲ್ದಾರ್ ವಿಶ್ವನಾಥ ಪೂಜಾರಿ ಕೆ, ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಪ್ರಧಾನ ಶಾಖಾ ವ್ಯವಸ್ಥಾಪಕ ಅಶ್ವತ್ಥ್ ವಿ. ಮೊದಲಾದವರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net