ಶ್ರಿ ಮಹದೇಶ್ವರ ಪ್ರೌಢಶಾಲೆ ಖೋ-ಖೋದಲ್ಲಿ ಪ್ರಥಮ ಸ್ಥಾನ

18 HANUR 4
ಚಾಮರಾಜನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡ ಖೋ-ಖೋದಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುವುದು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ಅಮರಾವತಿ, ಮಂಜುನಾಥ್, ನಾಗರಾಜು, ಶ್ಯಾಮ್ ಇತರರು ಇದ್ದರು.
Published on

ಹನೂರು: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡ ಖೋ- ಖೋ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಸಂಬಂಧ ವಿಜಯವಾಣಿಯೊಂದಿಗೆ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಸಾಲೂರು ಬೃಹನ್ಮಠವು ಹಲವು ಸಾಮಾಜಿಕ ಕಾರ್ಯಗಳ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದೆ. ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಬಡಕುಟುಂಬ ಹಾಗೂ ಕಾಡಂಚಿನ ಗ್ರಾಮಕ್ಕೆ ಸೇರಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಜತೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿಯನ್ನು ಮೂಡಿಸಿ ಅಗತ್ಯ ತರಬೇತಿ ನೀಡುವುದರ ಮೂಲಕ ಉತ್ತೇಜನ ನೀಡಲಾಗುತ್ತಿದೆ. ಈ ದಿಸೆಯಲ್ಲಿ ಕಳೆದ ತಿಂಗಳ ಹಿಂದೆ ನಡೆದ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ಹಲವು ಮಕ್ಕಳು ವಿವಿಧ ಪಂದ್ಯದಲ್ಲಿ ಭಾಗವಹಿಸಿ ಹೆಚ್ಚಿನ ರೀತಿಯಲ್ಲಿ ಜಯಗಳಿಸಿದ್ದರು. ಇದೀಗ ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡ ಖೋ-ಖೋ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುವುದು ಸಂತಸದ ಸಂಗತಿ. ಹಾಗಾಗಿ ವಿಭಾಗೀಯ ಮಟ್ಟದಲ್ಲೂ ಸಹ ವಿದ್ಯಾರ್ಥಿಗಳು ಜಯಗಳಿಸಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net