ಮೂರ್ತಿ ಪ್ರತಿಷ್ಠಾಪನೆ ದಿನ ಹಬ್ಬದ ವಾತಾವರಣ ನಿರ್ಮಾಣಗೊಳ್ಳಲಿ

TENGINAKAYI NEW 1111
Published on

ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯಾಗುವ ಜ. 22ರಂದು ಪ್ರತಿ ಮನೆಯಲ್ಲಿ ದೀಪಾವಳಿಯಂತೆ ಹಬ್ಬದ ಆಚರಣೆ ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಎಲ್ಲ ದೇವಸ್ಥಾನಗಳನ್ನು ಜ. 14 ರಿಂದ 22ರವರೆಗೆ ಸ್ವಚ್ಛಗೊಳಿಸಬೇಕು. ಎಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣಗೊಳ್ಳಲಿ ಎಂದು ತಿಳಿಸಿದರು.

ವಾರ್ಡ್ ಪ್ರಮುಖರಿಗೆ ಇದೇ ಸಂದರ್ಭದಲ್ಲಿ ಭಗವಾಧ್ವಜ ವಿತರಿಸಲಾಯಿತು. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಹುಬ್ಬಳ್ಳಿ-ಧಾರವಾಡದಿಂದ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಂಡೂರು, ಉಮೇಶಗೌಡ ಕೌಜಗೇರಿ, ಎಂ.ವೈ. ನರಗುಂದ, ಉಮಾ ಮುಕುಂದ, ಚಂದ್ರಿಕಾ ಮೇಸ್ತ್ರಿ, ರೂಪಾ ಶೆಟ್ಟಿ, ರವಿ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net