6 ರಂದು ಬಳಂಜದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಆಯೋಜನೆ

sharade
Published on

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ ವತಿಯಿಂದ ಹಾಗೂ ಊರವರ ಸಹಕಾರದೊಂದಿಗೆ ದ್ವಿತೀಯ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.6ರಂದು ವಿವಿಧ, ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಭಜನಾ ಕಾರ್ಯಕ್ರಮಗಳೊಂದಿಗೆ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಉದ್ಘಾಟಿಸಲಿದ್ದು, ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಬಳಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಶ್ರೀ ಕ್ಲಿನಿಕ್‌ನ ವೈದ್ಯ ಡಾ.ಎನ್.ಎಂ.ತುಳಪುಳೆ ಅಳದಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬಂಟ್ವಾಳ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಬಳಂಜ ಗ್ರಾ.ಪಂ. ಅಧ್ಯಕ್ಷೆ ಶೋಭಾ ಕುಲಾಲ್, ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್, ಸಮಾಜ ಸೇವಕ ರವಿ ಕಕ್ಕೆಪದವು, ಗುಜರಾತ್ ಉದ್ಯಮಿ ಶೇಖರ್ ದೇವಾಡಿಗ ಭಾಗವಹಿಸಲಿದ್ದಾರೆ.

ಬೆಳಗ್ಗೆ ಗಂಟೆ 8.30ರಿಂದ ಆಟೋಟ ಸ್ಪರ್ಧೆಗಳು, ಪುರುಷರಿಗೆ ವಲಯ ಮಟ್ಟದ ಕೆ.ಜಿ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮ

ಬೆಳಗ್ಗೆ 6.30ಕ್ಕೆ ಸ್ವಸ್ತಿ ಪುಣ್ಯಾಹ, ದೇವತಾ ಪ್ರಾರ್ಥನೆ, ಗಣಹೋಮ, ಭಜನೆ, ಬೆಳಗ್ಗೆ 9ರಿಂದ ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿ ಹಾಗೂ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 9.30ಕ್ಕೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಧ್ಯಾಹ್ನ 1ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 5ಕ್ಕೆ ಮಹಾಪೂಜೆ, ಮಂಗಳಾರತಿ, ಸಂಜೆ 5.30ರಿಂದ ದೇವರ ಭವ್ಯ ಶೋಭಾಯಾತ್ರೆ ನಡೆದು ಕಾಪಿನಡ್ಕ ಪಲ್ಗುಣಿ ನದಿಯಲ್ಲಿ ಶಾರದಾ ದೇವಿಯ ಮೂರ್ತಿ ವಿಸರ್ಜನೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net