

ಧಾರವಾಡ: ನಗರದ ಮಾಳಮಡ್ಡಿ ಕರ್ನಾಟಕ ಎಜುಕೇಶನ್ ಬೋರ್ಡ್ ಸೆಂಟ್ರಲ್ ಸ್ಕೂಲ್‌ನ ೧೦ನೇ ತರಗತಿಯ ವಿದ್ಯಾರ್ಥಿ ಶ್ರೀಕರ ಸಬನೀಸ್ ಇತ್ತಿಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ೧೧ನೇ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಬಾಚಿಕೊಂಡಿದ್ದಾನೆ. ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಽಕಾರದಲ್ಲಿ ನಡೆದ ಸ್ಪರ್ಧೆಯಲ್ಲಿ ೧೬ಕ್ಕಿಂತ ಕಿರಿಯರ (ಸಬ್ ಯುಥ್) ವಯೋಮಿತಿಯ ೧೦ ಮೀ. ಏರ್ ರೈಫಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕೆ ಗುರಿ ಇಟ್ಟಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಶ್ರೀಕಾಂತ ಪಾಟೀಲ ಹಾಗೂ ಪದಾಽಕಾರಿಗಳು ಅಭಿನಂದಿಸಿದ್ದಾರೆ.