ಶ್ರೀ ಅನ್ನದಾನೇಶ್ವರ ಮೂರ್ತಿ ಮೆರವಣಿಗೆ

29 ALVANDI 02
ಅಳವಂಡಿ ಸಮೀಪದ ನೀರಲಗಿಯಲ್ಲಿ ಅನ್ನದಾನೇಶ್ವರ ಜಾತ್ರೆ ಅಂಗವಾಗಿ ಶ್ರೀ ಅನ್ನದಾನೇಶ್ವರ ಉತ್ಸವ ಮೂರ್ತಿ ಮೆರವಣಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
Published on

ಅಳವಂಡಿ: ಸಮೀಪದ ನೀರಲಗಿ ಗ್ರಾಮದ ಆರಾಧ್ಯ ದೇವ ಶ್ರೀಗುರು ಅನ್ನದಾನೇಶ್ವರ ಮಹಾಸ್ವಾಮೀಜಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಅನ್ನದಾನೇಶ್ವರ ಉತ್ಸವ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ಸೋಮವಾರ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿ ಸಿಂಗರಿಸಲಾಗಿತ್ತು. ಮೂರ್ತಿಗೆ ವಿವಿಧ ಪೂಜೆ ಹಾಗೂ ಪಂಚಾಮೃತ ಅಭಿಷೇಕ ಕಾರ್ಯಕ್ರಮ ನಡೆಯಿತು.

ನಂತರ ತಳಿರು, ತೋರಣ, ಅಲಂಕಾರಿಕ ವಸ್ತುಗಳು ಹಾಗೂ ಹೂಗಳಿಂದ ಸಿಂಗರಿಸಿ ತೆರೆದ ವಾಹನದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನಿರಿಸಿ ಸಕಲ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net