ತೆಂಕಲಗೋಡು ಬೃಹನ್ ಮಠದ ಪೀಠಾಧ್ಯಕ್ಷರು ಲಿಂಗೈಕ್ಯ

Channamallikarjuna Shivacharya Swamiji
Published on

ಸಕಲೇಶಪುರ: ಯಸಳೂರಿನ ತೆಂಕಲಗೋಡು ಬೃಹನ್ ಮಠದ ಪೀಠಾಧ್ಯಕ್ಷ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಶನಿವಾರ ಸಂಜೆ ಲಿಂಗೈಕ್ಯರಾದರು.

ಮಧುಮೇಹ ಸಮಸ್ಯೆ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಜು.26 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಿಂದಲೇ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುವುದನ್ನು ನಿಲ್ಲಿಸಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು(ಶನಿವಾರ) ಚಿಕಿತ್ಸೆ ಫಲಿಸದೆ ಶ್ರೀಗಳು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಭಾನುವಾರ ಯಸಳೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net