ಶ್ರೀ ದೊಡ್ಡಮ್ಮತಾಯಿ ಉತ್ಸವಮೂರ್ತಿ ಮೆರವಣಿಗೆ

IMG-20240502-WA0063
ಪಿರಿಯಾಪಟ್ಟಣ ತಾಲೂಕು ಎಸ್.ಕೊಪ್ಪಲು ಗ್ರಾಮದಲ್ಲಿ ಶ್ರೀ ದೊಡ್ಡಮ್ಮತಾಯಿ ಉತ್ಸವಮೂರ್ತಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.
Published on

ರಾವಂದೂರು: ಶ್ರೀ ದೊಡ್ಡಮ್ಮತಾಯಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗುರುವಾರ ರಾವಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವೈಭವದ ಮೆರವಣಿಗೆ ನಡೆಸಲಾಯಿತು.

ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಶ್ರೀ ಆದಿಶಕ್ತಿ ದೊಡ್ಡಮತಾಯಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚುಂಚನಕಟ್ಟೆ ಕಾವೇರಿ ನದಿಯ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ದೊಡ್ಡಮ್ಮತಾಯಿ ಉತ್ಸವಮೂರ್ತಿಯನ್ನು ಗ್ರಾಮದ ಉದ್ದಕ್ಕೂ ಭಕ್ತಾದಿಗಳು ಪೂಜೆ ಸಲ್ಲಿಸಿದರು. ಎಸ್.ಕೊಪ್ಪಲು ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಗ್ರಾಮದ ಯುವಕರ ತಂಡದ ವತಿಯಿಂದ ಬಂದಂತಹ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಾಗೂ ಮಜ್ಜಿಗೆ, ಪಾನಕ ವಿತರಿಸಲಾಯಿತು.

ಪಿರಿಯಾಪಟ್ಟಣ ತಾಲೂಕು ಎಸ್.ಕೊಪ್ಪಲು ಗ್ರಾಮದಲ್ಲಿ ಶ್ರೀ ದೊಡ್ಡಮ್ಮತಾಯಿ ಉತ್ಸವಮೂರ್ತಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net