

ಮಂಜೇಶ್ವರ: ಸುಂಕದಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಧಾರ್ಮಿಕ, ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮ ನಡೆಯಿತು. ಗುರುರಾಜ್ ಕಾಸರಗೋಡು ಅವರನ್ನು ಗೌರವಿಸಲಾಯಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಾದ ವಿಕ್ರಮದತ್ತ, ದೇವದಾಸ್, ಆನಂದ್ ಟಿ., ದಯಾನಂದ್, ರಘುನಾಥ್, ಸುರೇಂದ್ರ, ಸಂಸ್ಥೆ ಗೌರವಾಧ್ಯಕ್ಷ ಗಣೇಶ್ ಪ್ರಸಾದ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.