ಶ್ರೀ ಗೂಳಿ ಬಸವೇಶ್ವರ ರಥೋತ್ಸವ

New Pm 4 New
Published on

ಹುಬ್ಬಳ್ಳಿ : ಕುಂದಗೋಳ ತಾಲೂಕಿನ ವಿಠಲಾಪೂರ ಗ್ರಾಮದ ಪ್ರಸಿದ್ಧ ಶ್ರೀ ಗೂಳಿ ಬಸವೇಶ್ವರ ರಥೋತ್ಸವ ಏ. 7ರಂದು ನಡೆಯಲಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶ್ರೀ ಗೂಳಿ ಬಸವೇಶ್ವರ ಟ್ರಸ್ಟ್ ಅಧ್ಯಕ್ಷ ವಿರುಪಾಕ್ಷಪ್ಪ ಕಟ್ಟಿಮನಿ, ಅಂದು ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ. ರಾತ್ರಿ 9.35ಕ್ಕೆ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಎಂ.ಆರ್. ಪಾಟೀಲ ಭಜನಾ ಸ್ಪರ್ಧೆಗೆ ಚಾಲನೆ ನೀಡುವರು. ಗ್ರಾಪಂ ಅಧ್ಯಕ್ಷ ಮಂಜುನಾಥ ಬೂದಪ್ಪನವರ, ಉಪಾಧ್ಯಕ್ಷೆ ಪಾರ್ವತೆವ್ವ ಮಡ್ಲಿ, ಸದಸ್ಯೆ ಕಾಶವ್ವ ಹುತ್ತನಗೌಡ್ರ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.

8ರಂದು ಶ್ರೀ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಡುಬಿನ ಕಾಳಗ, ಪಲ್ಲಕ್ಕಿ ಉತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಹುಬ್ಬಳ್ಳಿಯ ಶ್ರೀ ರಾಜ ವಿದ್ಯಾಶ್ರಮದ ಶ್ರೀ ಷಡಕ್ಷರಿ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net