

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಬಾವಿ ಗ್ರಾಮದ ಹಳೆಯ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಏ. 12ರಂದು ಶ್ರೀ ಹನುಮ ಜಯಂತಿ ಮಹೋತ್ಸವ ಜರುಗಲಿದೆ. ಜಯಂತಿ ಅಂಗವಾಗಿ ಪ್ರಾತಃಕಾಲದಲ್ಲಿ ಶ್ರೀ ವೀರಾಂಜನೇಯ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ತೊಟ್ಟಿಲೋತ್ಸವ ಜರುಗಲಿದೆ. 8 ಗಂಟೆಗೆ ವೀರಾಂಜನೇಯಸ್ವಾಮಿ ಭಾವಚಿತ್ರದ ಮೆರವಣಿಯನ್ನು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಶ್ರೀ ಅಭಿನವ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.