

ಬಂಟ್ವಾಳ: ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ಮಹಾರಥೊತ್ಸವ ನಡೆಯಿತು. ಕ್ಷೇತ್ರದ ಅರ್ಚಕ ಮಿಥುನ್ರಾಜ್ ನಾವಡ ಮತ್ತು ಜಯಶಂಕರ ಉಪಾಧ್ಯಾಯ ಸಹಕಾರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆ ಕವಾಟೋದ್ಘಾಟನೆ, ಮಹಾರಥೋತ್ಸವ, ದೈವದ ನೇಮೋತ್ಸವ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಬಲಿ ಉತ್ಸವ ನಡೆಯಿತು. ಶನಿವಾರ ಕಟ್ಟೆಪೂಜೆ ಉತ್ಸವ, ರಾತ್ರಿ ಕಟ್ಟೆಪೂಜೆ ಉತ್ಸವಗಳು, ದೇವರ ಶಯನ, ಕವಾಟ ಬಂಧನ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಆಡಳಿತಾಧಿಕಾರಿ ಸಚಿನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಜಿ.ಪಂ. ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಗ್ರಾಮಣಿ ಗಣಪತಿ ಮುಚ್ಚಿನ್ನಾಯ, ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷ ಅಜಿತ್ ಶೆಟ್ಟಿ, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ ಮತ್ತಿತರರು ಭಾಗವಹಿಸಿದ್ದರು. ಕ್ಷೇತ್ರದ ಪ್ರಬಂಧಕ ವಿನಯ್ ಕುಮಾರ್ ಮತ್ತು ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳು, ಪೊಲೀಸ್ ಸಿಬ್ಬಂದಿ ಸಹಕರಿಸಿದರು.