ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ 28ರಂದು

valmiki
Published on

ಧಾರವಾಡ: ಇಲ್ಲಿನ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಜಿಲ್ಲಾಽಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಽಕಾರಿ ಗುರುದತ್ತ ಹೆಗಡೆ ಮಾತನಾಡಿ, ಅ. ೨೮ರಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಕಾರ್ಯಕ್ರಮ ರೂಪಿಸಿದೆ. ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜ ಸೇವೆಗೈದ ಸಾಧಕರನ್ನು ಗೌರವಿಸಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಭಕಾಷ್ ಎಂ.ಎಸ್. ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಸಮುದಾಯಗಳ ಮುಖಂಡರಾದ ಸುರೇಶ ಬಾಬು, ಸಿದ್ದಪ್ಪ ತಳವಾರ, ಶಾಂತವ್ವ ಗುಜ್ಜಳ, ಡಾ. ಕಲ್ಮೇಶ ಹಾವೇರಿಪೇಟ, ಜಿ.ಎನ್. ಕೂಬಿಹಾಳ, ಸುಲೋಚನಾ ಸುರಕೋಡ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net