ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ

30 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ಅಗತ್ಯ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಾ. ಅಜಿತ ಪ್ರಸಾದ್ ಹೇಳಿದರು.
ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ಕಾಲೇಜಿನ 2024- 25ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಯಲ್ಲಿ ಸದ್ಗುಣ, ಬದ್ಧತೆ, ಧೈರ್ಯ, ವಿನಯ, ಆತ್ಮವಿಶ್ವಾಸ ಇರಬೇಕು. ಈ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಫಲರಾಗುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಡಿಸಿಪಿ ರವೀಶ ಸಿ.ಆರ್. ಮಾತನಾಡಿ, ಗುರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯಬೇಕು. ಸಾಽಸುವ ಛಲದೊಂದಿಗೆ ನಿರಂತರ ಪ್ರಯತ್ನಶೀಲರಾಗಬೇಕು. ಗುರು, ತಂದೆ- ತಾಯಿಗೆ ಒಳ್ಳೆಯವರಾದಾಗ ಮಾತ್ರ ಒಳ್ಳೆಯ ಸಮಾಜ ನಿರ್ಮಾಣ ಸಾಧ್ಯ ಎಂದರು.
ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪ ಪ್ರಾಚಾರ್ಯ ಡಾ. ಸೂರಜ್ ಜೈನ್, ಪ್ರಾಚಾರ್ಯ ರವಿವರ್ಮಾ ಜೋಶಿ, ಕ್ರೀಡಾ ನಿರ್ದೆಶಕ ಪವನ ಗೊರವರ, ರಕ್ಷಿತಾ ಚೌಕಿಮಠ, ರಿತ್ವಿಕ್ ನಾಯಕ್, ಇತರರಿದ್ದರು. ಡಾ. ಎಸ್.ಕೆ. ನಡುವಿನಕೇರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net