ಶ್ರೀ ಮುರ್ಡೆಶ್ವರ ದೇವರ ರಥೋತ್ಸವ

19bkl1 (1)
Published on

ಭಟ್ಕಳ: ತಾಲೂಕಿನ ಮುರ್ಡೆಶ್ವರದ ಮಾತೋಬಾರ ಶ್ರೀದೇವರ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ಸಂಜೆ ಜರುಗಿತು.

ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಧಾರ್ವಿುಕ ಕಾರ್ಯಕ್ರಮಗಳು, ಹೋಮ ಹವನ ನಡೆಸಲಾಯಿತು. ಮಧ್ಯಾಹ್ನದಿಂದ ಸಾವಿರಾರು ಭಕ್ತಾದಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ 5.30 ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥವನ್ನು ದೇವಸ್ಥಾನದ ಕೆರೆಯ ಸುತ್ತ ಭಕ್ತಾದಿಗಳ ಜಯಘೊಷದೊಂದಿಗೆ ಎಳೆಯಲಾಯಿತು.

ರಥೋತ್ಸವದ ಸಂದರ್ಭದಲ್ಲಿ ಸುಮಾರು 20 ಸಾವಿರ ಭಕ್ತಾದಿಗಳು ಪಾಲ್ಗೊಂಡಿದ್ದರು. ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ತಹಸೀಲ್ದಾರ್ ರವಿಚಂದ್ರ, ದೇವಸ್ಥಾನದ ಟ್ರಸ್ಟಿಗಳು ಸೇರಿ ವಿವಿಧ ಗಣ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net