

ಗಂಗೊಳ್ಳಿ: ಹಸಿ ಮೀನು ವ್ಯಾಪಾರಸ್ಥರ ಸಂಘ ವತಿಯಿಂದ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಗುರುವಾರ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಪುರೋಹಿತ ಜಿ.ರವೀಶ್ ಭಟ್ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಅನುಷ್ಠಾನ ಸಂಪನ್ನಗೊಂಡಿತು. ಹಸಿ ಮೀನು ವ್ಯಾಪಾರಸ್ಥರ ಸಂಘ ಅಧ್ಯಕ್ಷ ಜನಾರ್ದನ ಖಾರ್ವಿ ಪೂಜೆಯ ಯಜಮಾನಿಕೆ ವಹಿಸಿದ್ದರು. ಮೀನುಗಾರ ಸಂಘಟನೆಗಳ ಪ್ರಮುಖರು, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ, ಸದಸ್ಯರು, ಕರಾವಳಿ ಕಾವಲು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್, ಸಿಬ್ಬಂದಿ, ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕರು ಪಾಲ್ಗೊಂಡರು.