ಶ್ರೀ ಶನೈಶ್ಚರ ಸ್ವಾಮಿ ಮಹಾ ರಥೋತ್ಸವ

18blrp1
Published on

ಬೇಲೂರು: ತಾಲೂಕಿನ ಭಿಷ್ಠಮ್ಮನವರ ಕೆರೆಕೋಡಿ ಮಲ್ಲಾಪುರ ಗ್ರಾಮದಲ್ಲಿ ಶ್ರೀ ಶನೈಶ್ಚರ ಸ್ವಾಮಿ ಮಹಾ ರಥೋತ್ಸವ ಮಂಗಳವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ರಥೋತ್ಸವ ಅಂಗವಾಗಿ ಮುಂಜಾನೆಯಿಂದಲೇ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 1-30 ರಿಂದ 2 ಗಂಟೆಯೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ಶ್ರೀ ಶನೈಶ್ಚರ ಸ್ವಾಮಿಯ ಮೂರ್ತಿಯನ್ನು ಅಲಂಕೃತ ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ರಥ ಎಳೆದು ಭಕ್ತಿ ಮೆರೆದರು. ಕೆಲ ಭಕ್ತರು ರಥಕ್ಕೆ ಬಾಳೆ ಹಣ್ಣು, ಕಾಳು ಮೆಣಸು ಎಸೆದು ಕೃತಾರ್ಥರಾದರು. ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.

ದೇಗುಲ ಸಮಿತಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ , ನಿರ್ದೇಶಕರಾದ ಜಿ.ಶಾಂತಕುಮಾರ್, ಧರ್ಮೇಗೌಡ, ಕೇಶವಮೂರ್ತಿ, ಬಿಟ್ರುವಳ್ಳಿ ಉಮೇಶ್, ಶಾಂತೇಗೌಡ, ಸನ್ಯಾಸಿಹಳ್ಳಿ ಗ್ರಾಪಂ ಅಧ್ಯಕ್ಷ ಕೋಳಿಶಿವು, ಎಸ್.ನಾಗೇಶ್ ಹಾಗೂ ಮಲ್ಲಾಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net