ಶ್ರೀ ಶಂಕರಾಚಾರ್ಯ ಜಯಂತಿ

25adarshkdga2
Published on

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.


ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.


ಶ್ರೀ ಶಂಕರಾಚಾರ್ಯರು ವಿದ್ಯೆಗೆ ಹೆಚ್ಚಿನ ಒತ್ತು ನೀಡಿದ್ದರು. ವಿದ್ಯೆಯು ಆತ್ಮಜ್ಞಾನ ನಮ್ಮ ತನದ ಅರಿವೇ ವಿದ್ಯೆ ಆಗಿದೆ ಎಂಬುದನ್ನು ತಿಳಿಸಿದ್ದಾರೆ ಎಂದು ಗಣ್ಯರು ಪ್ರತಿಪಾದಿಸಿದರು.


ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರ ಬಗ್ಗೆ ಪ್ರತಿಪಾದಿಸಿದ್ದಾರೆ. ಜ್ಞಾನವೇ ಆತ್ಮಜ್ಞಾನ, ಬ್ರಹ್ಮಜ್ಞಾನ ಎಂಬುದನ್ನು ಆಚಾರ್ಯರ ಕಾಣಿಕೆಯ ಸಾರವಾಗಿದೆ ಎಂದು ಗಣ್ಯರು ಹೇಳಿದರು.


ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಬಾಲರಾಜ್ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net