ವೀರಭದ್ರೇಶ್ವರಸ್ವಾಮಿ ರಥೋತ್ಸವ ವೈಭವ

19ark2
Published on

ಅರಕಲಗೂಡು; ತಾಲೂಕಿನ ಕೇರಳಾಪುರ ಗ್ರಾಮದಲ್ಲಿ ಐತಿಹಾಸಿಕ ಶ್ರೀ ವೀರಭದ್ರೇಶ್ವರಸ್ವಾಮಿಯ ದಿವ್ಯ ರಥೋತ್ಸವ ಮಂಗಳವಾರ ಸಂಭ್ರಮದಿಂದ ನೆರವೇರಿತು.

ಬೆಳಗ್ಗೆ ದೇವಸ್ಥಾನದಲ್ಲಿ ಮೂಲ ದೇವರಿಗೆ ಅಭಿಷೇಕ, ವಿಶೇಷ ಪೂಜಾ ವಿಧಾನಗಳು ವಿಧಿವತ್ತಾಗಿ ನಡೆದವು. ಮಧ್ಯಾಹ್ನ ಶುಭ ಮುಹೂರ್ತದಲ್ಲಿ ದೇವರ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿಸಿ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು. ನಂತರ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ಭಕ್ತರು ಹರ್ಷೋದ್ಗಾರದ ನಡುವೆ ತೇರು ಎಳೆದು ಭಕ್ತಿ ಮೆರೆದರು.

ರಥ ಬೀದಿಯಲ್ಲಿ ಸುತ್ತು ಹಾಕಿದ ತೇರನ್ನು ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಬಳಿ ಸಂಪ್ರದಾಯದಂತೆ ವಿಶ್ರಾಂತಿಗಾಗಿ ನಿಲ್ಲಿಸಲಾಯಿತು. ಸಂಜೆ ವೇಳೆಗೆ ದೇವಸ್ಥಾನದ ಬಳಿ ಸ್ವಸ್ಥಾನಕ್ಕೆ ಸುಸೂತ್ರವಾಗಿ ತಲುಪಿತು. ರಥೋತ್ಸವದಲ್ಲಿ ಸುತ್ತಲಿನ ಹಳ್ಳಿಗಳ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net