

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸದಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯ ಎಂದು ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ಹೇಳಿದರು.
ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸುತ್ತಮುತ್ತ ಕಾಣುವ ಅನೇಕ ಅದ್ಭುತ ಕಲಾಕೃತಿಗಳ ಹಿಂದೆ ವಿಶ್ವಕರ್ಮರ ಶ್ರಮ ಮತ್ತು ಕೌಶಲ್ಯ ಅಡಗಿದೆ. ಆಧುನಿಕ ಯುಗದಲ್ಲಿಯೂ ವಿಶ್ವಕರ್ಮ ಸಮುದಾಯವು ಸಾಂಪ್ರದಾಯಿಕ ಕೌಶಲ್ಯಗಳನ್ನು ಉಳಿಸಿಕೊಂಡು ಬಂದಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಸಮಕಾಲೀನ ಸಮಾಜದ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನ್ನು ಮುಂದುವರಿಸುತ್ತಿದ್ದಾರೆ ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಮಾತನಾಡಿ, ಪೂರ್ವಜರು ಮಾಡಿದ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಚಿತ್ರಕಲೆಗಳು, ಶಿಲ್ಪಕಲೆಗಳು ಶತಮಾನಗಳಿಂದ ಉಳಿದು ಮಹತ್ವ ಸಾರುತ್ತಿವೆ ಎಂದರು.
ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿದರು. ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಗುರುನಾಥ ಬಡಿಗೇರ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.
ಶ್ರೀ ಮೌನೇಶ್ವರ ಧರ್ಮನಿಽ ಸಂಸ್ಥೆ ಟ್ರಸ್ಟ್ ಅಧ್ಯಕ್ಷ ಮಹಾರುದ್ರ ಬಡಿಗೇರ, ವಿಶ್ವಕರ್ಮ ಮಹಾ ಒಕ್ಕೂಟದ ವಿಭಾಗೀಯ ಅಧ್ಯಕ್ಷ ನಿರಂಜನ ಬಡಿಗೇರ, ಜಿಲ್ಲಾ ಅಧ್ಯಕ್ಷ ಸಂತೋಷ ಬಡಿಗೇರ, ಮಹಾಸಭಾ ಜಿಲ್ಲಾಧ್ಯಕ್ಷ ಕಾಳಪ್ಪ ಬಡಿಗೇರ, ನೌಕರರ ಸಂಘದ ಅಧ್ಯಕ್ಷ ವಿಠ್ಠಲ ಕಮ್ಮಾರ, ಮುಖಂಡರಾದ ವಸಂತ ಅರ್ಕಾಚಾರ, ಭಾಸ್ಕರ ಬಡಿಗೇರ, ಸುಮಿತ್ರಾ ಬಡಿಗೇರ, ಇತರರಿದ್ದರು.
ರವಿ ಕುಲಕರ್ಣಿ ನಿರೂಪಿಸಿದದರು. ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.