

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಅಂಗಸAಸ್ಥೆಗಳಲ್ಲಿ ನೈತಿಕ ಶಿಕ್ಷಣ ಕಲಿಸಲು ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಸ್ಪೂರ್ತಿ. ಶ್ರೀಕೃಷ್ಣನ ಪರಮ ಭಕ್ತರಾಗಿದ್ದ ಅವರು ಸರ್ವಧರ್ಮ ಸಹಿಷ್ಣುಗಳಾಗಿದ್ದರು. ದೀನ ದಲಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಹೇಳಿದರು.
ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀಗಳು ಅನ್ನದಾನ, ವಿದ್ಯಾದಾನದಿಂದ ಹಸಿದ ಹೊಟ್ಟೆ ಹಾಗೂ ಮನಸುಗಳನ್ನು ತಣಿಸುವಂತೆ ಮಾಡಿದ್ದರು. ಅವರು ಹಾಕಿಕೊಟ್ಟ ಸುಸಂಸ್ಕೃತ ಭಕ್ತಿ ಮಾರ್ಗದಲ್ಲಿ ಜೆಎಸ್‌ಎಸ್ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಮಹಾವೀರ ಉಪಾಧ್ಯೆ, ಡಾ. ಸೂರಜ ಜೈನ್, ಸಾಧನಾ ಎಸ್., ಇತರರಿದ್ದರು.
ಜೆಎಸ್‌ಎಸ್ ಅಂಗಸAಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಶ್ರೀಗಳ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.