ಕುಂಬಳೆ: ಕುಂಬಳೆ ಶ್ರೀಧರ ರಾವ್ ಸ್ಮತಿ ಕಾರ್ಯಕ್ರಮ ಡಿ.29ರಂದು ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೆಳಗ್ಗೆ 9ರಿಂದ ಜರುಗಲಿದೆ. ಬೆಳಗ್ಗೆ 9ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಸಂಜೆ 4ಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀಧರ ಸ್ಮತಿ ನಡೆಯಲಿದೆ.
ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸುವರು. ಎಸ್.ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸುವರು. ವಿದ್ವಾಂಸ, ಅರ್ಥದಾರಿ ಡಾ.ಎಂ.ಪ್ರಭಾಕರ ಜೋಶಿ ಸ್ಮರಿಸಲಿದ್ದಾರೆ. ಪತ್ರಕರ್ತ, ಕಲಾವಿದ ನಾ.ಕಾರಂತ ಪೆರಾಜೆ ಸಂಪಾದಕತ್ವದಲ್ಲಿ ‘ಕಲಾ ಶ್ರೀಧರ’ ಕೃತಿ ಬಿಡುಗಡೆಯಾಗಲಿದೆ. 9.30ರಿಂದ ಕುಂಬಳೆ ಶ್ರೀಧರ ರಾವ್ ಅವರ ಪ್ರಧಾನ ಪಾತ್ರಗಳ ನೆನವರಿಕೆಯ ‘ಸಂವಾದದ ತಾಳಮದ್ದಳೆ’ ಹಾಗೂ ‘ಕೃಷ್ಣ ಸಂಧಾನ’ ಆಖ್ಯಾನದ ತಾಳಮದ್ದಳೆ ಜರುಗಲಿದೆ. ಬಳಿಕ ಯಕ್ಷಗಾನ ಪ್ರದರ್ಶಿತವಾಗಲಿದೆ.