ಶ್ರೀನಿವಾಸ ವಿ.ವಿ.ಯಲ್ಲಿ ಟೆಕ್ ಹೊರೈಜಾನ್ -24 ರಾಷ್ಟ್ರಮಟ್ಟದ ಸಮ್ಮೇಳನ

mng-4july-shrinivas
Published on


ಮಂಗಳೂರು : ನಗರದ ಶ್ರೀನಿವಾಸ ವಿಶ್ವವಿದ್ಯಾಲಯದ ಶ್ರೀನಿವಾಸ ಇನ್ಸ್‌ಟಿಟ್ಯೂಟ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್ ವತಿಯಿಂದ ಟೆಕ್ ಹೊರೈಜಾನ್ -24 ರಾಷ್ಟ್ರಮಟ್ಟದ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿದ ಮಣಿಪಾಲ ಎಂಐಟಿಯ ಪ್ರಾಧ್ಯಾಪಕಿ ಡಾ. ಪೂರ್ಣಲತಾ ಜಿ. ಮಾತನಾಡಿ ‘ ಸಂಶೋಧನೆ ಎಂಬುದು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯಬೇಕಾದ ಕೆಲಸ ಎಂದರು.
ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ಇನ್ಸ್‌ಟಿಟ್ಯೂಟ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್‌ನ ಡೀನ್
ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ ‘ ಸಂಶೋಧನೆಗಳು ಸಮಾಜಕ್ಕೆ ಪೂರಕವಾಗಲಿ ಎಂದರು. ದೇಶದ ವಿವಿಧ ಕಡೆಗಳಿಂದ ಒಟ್ಟು 61 ಸಂಶೋಧನಾ ಪ್ರಬಂಧಗಳು ಸಮ್ಮೇಳನದಲ್ಲಿ ಮಂಡಿಸಲ್ಪಟ್ಟವು. ಸಮ್ಮೇಳನದ ಸಂಚಾಲಕಿ ಡಾ. ಸೌಮ್ಯ ಎಸ್. ಉಪಸ್ಥಿತರಿದ್ದರು.
ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್ ಮುಖ್ಯಸ್ಥ ಡಾ.ಶ್ರೀಧರ ಆಚಾರ್ಯ ಸ್ವಾಗತಿಸಿ, ಎಂಸಿಎ ವಿಭಾಗದ ಮುಖ್ಯಸ್ಥೆ ಪ್ರೊ. ಸ್ವಾತಿ ಸುರೇಶ್ ವಂದಿಸಿದರು. ಪ್ರೊ. ರಿಯಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net