ಶ್ರೀನಿವಾಸ ವಿ.ವಿ.ಯಲ್ಲಿ ರಾಷ್ಟ್ರೀಯ ಸಮ್ಮೇಳನ

gggggggggggggg
Published on


ಮಂಗಳೂರು :ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಫೊರೆನ್ಸಿಕ್ ಸೈನ್ಸ್ ವಿಭಾಗ
ಮತ್ತು ಫೊರೆನ್ಸಿಕ್ ಮೆಡಿಸಿನ್ ವಿಭಾಗ, ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್,
ಕ್ರಿಮಿನಾಲಜಿ ಮತ್ತು ಫೊರೆನ್ಸಿಕ್ ಸೈನ್ಸ್ ಪಿಜಿ ವಿಭಾಗ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಮಂಗಳೂರು
ಸಹಯೋಗದಲ್ಲಿ ಶ್ರೀನಿವಾಸ ಮುಕ್ಕ ಕ್ಯಾಂಪಸ್‌ನಲ್ಲಿ ಅಡಿಕ್ಷನ್ ಫೊರೆನ್ಸಿಕ್ - ಡ್ರಗ್ ಇನ್ವೆಸ್ಟಿಗೇಷನ್ ವಿಷಯದ ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಿತು. ವಿವಿಧ ಕಾಲೇಜುಗಳಿಂದ 220ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಮನೋಜ್ ಕುಮಾರ್
ನಾಯ್ಕ್ ಮಾತನಾಡಿ ‘ಯುವಕರು ಮಾದಕ ವ್ಯಸನಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯ ಸೇವನೆ ಪ್ರಕರಣಗಳನ್ನು
ನಿಯಂತ್ರಿಸಲು ವಿದ್ಯಾರ್ಥಿಗಳ ಸಹಕಾರ ಅಗತ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಿ.ಎ. ರಾಘವೇಂದ್ರ ರಾವ್ ಮಾತನಾಡಿ ‘
ಮಾದಕ ವ್ಯಸನ ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ ಎಂದರು.
ಉಪಕುಲಪತಿ ಪ್ರೊ ಕೆ. ಸತ್ಯನಾರಾಯಣ ರೆಡ್ಡಿ ಅವರು ಸಮ್ಮೇಳನದ ವಿವರ ನೀಡಿದರು.
ಸೈಂಟ್ ಆಗ್ನೆಸ್ ಸೆಂಟರ್ ಫಾರ್ ಪಿಜಿ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಡಾ.ವಿ.ಪ್ರೇಮಾನಂದ್, ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಸಹಾಯಕ ಪ್ರಾಧ್ಯಾಪಕಿ ಡಾ. ಪರಿಣಿತಾ ಸಂಜೀವ್ ನಾಯ್ಕ , ಮಂಗಳೂರು ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯದ ಹಿರಿಯ ವೈಜ್ಞಾನಿಕ ಅಧಿಕಾರಿ ವೀಣಾ ಪಿ, ಎಸ್‌ಡಿಎಂ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕ ಮಹೇಶ್ಚಂದ್ರ
ನಾಯಕ್, ಸೈಬರ್ ಸೆಕ್ಯುರಿಟಿ ವಿಶ್ಲೇಷಕ ಚಿರಾಗ್. ಸಿ .ಸುವರ್ಣ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಡೀನ್ ಪ್ರೊ. ಪಾವನ ಕೃಷ್ಣಮೂರ್ತಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಡಾ.ಉದಯ ಕುಮಾರ್ ರಾವ್, ಸಮ್ಮೇಳನದ ಸಂಘಟಕರಾದ ಡಾ. ಸ್ವಾತಿ ಡಿ, ಡಾ ಸರಿತಾ ಡಿಸೋಜಾ ಉಪಸ್ಥಿತರಿದ್ದರು.
ಫೊರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥೆ ಡಾ.ವೃಂದಾ ಜೆ ಭಟ್ ಸ್ವಾಗತಿಸಿ, ಡಾ. ಮೀನಾ ಕಿರಣ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net