ಶ್ರೀಶಾ ಸೊಸೈಟಿಯಿಂದ ಉಚಿತ ವೈದ್ಯಕೀಯ ಶಿಬಿರ

mng-5sep-shrisha
Published on



ಮಂಗಳೂರು : ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವೇಣೂರಿನ ಗುಂಡೂರಿ ಗ್ರಾಮದ
ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಸಭಾಂಗಣದಲ್ಲಿ ಉಚಿತ ಆರೋಗ್ಯ ದಂತ ಹಾಗೂ ನೇತ್ರ ತಪಾಸಣಾ
ಶಿಬಿರ ನಡೆಯಿತು.
ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಹಾಗೂ ದೇರಳಕಟ್ಟೆಯ ಯೇನಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯರು ಶಿಬಿರದಲ್ಲಿ
ಭಾಗವಹಿಸಿದ್ದರು. 380ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು. ಕಣ್ಣಿನ ಸಮಸ್ಯೆ ಇದ್ದವರಿಗೆ ಸ್ಥಳದಲ್ಲೇ ಉಚಿತವಾಗಿ 115
ಕನ್ನಡಕ ನೀಡಲಾಯಿತು.
ಶ್ರೀೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಮಾತನಾಡಿ ‘ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಆರೋಗ್ಯ ಹಾಗೂ ಶಿಕ್ಷಣ ಅತೀ ಮುಖ್ಯ. ಈ ನಿಟ್ಟಿನಲ್ಲಿ ಶ್ರೀಶಾ ಸೊಸೈಟಿಯು ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು. ಸೊಸೈಟಿಯ ನಿರ್ದೇಶಕ ಸುರೇಶ್ ಬೈಂದೂರು ಶಿಬಿರದ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net